ವಿಟ್ಲ, ಜ 19 : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ.
ಈ ಘಟನೆಯಿಂದ ಮನೆಯಲ್ಲಿದ್ದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ.
ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ್ಡ ಕಾರಣ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಪುತ್ತೂರು ಅಗ್ಮಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.