ಪುತ್ತೂರು, ಫೆ 03 : ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಪ. ಪೂ. ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಇಂದು ಮುಂಜಾನೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.