ಮಂಗಳೂರು, ಫೆ.4 : ಜಪ್ಪಿನ ಮೊಗರು ಬಳಿಯ ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿರುವ ಘಟನೆ ಫೆ.3, ಶುಕ್ರವಾರ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ ಉರಿಯುತ್ತಿದ್ದು ಹತ್ತಾರು ವಾಹನಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ. ಘಟನೆ ಸಂಭವಿಸಿದ ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು, ಪೊಲೀಸ್ ಅಧಿಕಾರಿಗಳು ಅಗಮಿಸಿ ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ.
ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ಫರ್ಮರ್ ಸ್ಪೋಟಗೊಂಡು ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಆರಂಭಿಕ ಮಾಹಿತಿ ಲಭ್ಹವಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.