ಮಂಗಳೂರು, ಫೆ 08 : ನಗರದ ಶಕ್ತಿನಗರದಲ್ಲಿರುವ ಪ್ರತಿಷ್ಠಿತ ಸಿಟಿ ಆಸ್ಪತ್ರೆ ಯ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ಕಲುಷಿತ ಆಹಾರ ಸೇವನೆಯಿಂದ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಈ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಅವರು ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ನಿರ್ಲಕ್ಷ್ಯತೆಯ ಕುರಿತು ದೂರು ನೀಡಿದ್ದು ಅದರಂತೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ್ದ ಕೆಲವು ವಿದ್ಯಾರ್ಥಿನಿಯರಲ್ಲಿ ಭಾನುವಾರ ದಿಢೀರ್ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಸೋಮವಾರ ಹಾಸ್ಟೆಲ್ ನ ಬಹುತೇಕ ವಿದ್ಯಾರ್ಥಿನಿಯರಲ್ಲಿ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಬಳಿಕ ಎ ಜೆ ಹಾಸ್ಪಿಟಲ್ , ಕೆ ಎಂ ಸಿ ಆಸ್ಪತ್ರೆ, ಸಿಟಿ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ