ಕುಂದಾಪುರ, ಫೆ 09 : ಕುಂದಾಪುರ ನಗರ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ರೊಬ್ಬರು ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್ ಬಳಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಮೃತ ಪೊಲೀಸ್ ಕಾನ್‌ಸ್ಟೇಬಲ್ ರಾಮ ನಾಗೇಶ ಗೌಡ ಅವರ ವಯಸ್ಸು 32 ವರ್ಷ ಎನ್ನಲಾಗಿದೆ . ಘಟನೆಗೆ ಅನಾರೋಗ್ಯ ಅಥವಾ ಆನ್ಲೈನ್ ಬೆಟ್ಟಿಂಗ್‌ನಿಂದಾಗಿ ಉಂಟಾದ ಆರ್ಥಿಕ ಸಂಕಷ್ಟ ಕಾರಣ ಎಂಬ ಶಂಕೆ ಮೂಡಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.