ಶ್ರೀನಗರ, ಫೆ. 16 : ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿರುವ ಘಟನೆ ನಡೆದಿದೆ.
ಕುಪ್ವಾರ ಪೊಲೀಸರ ನಿಖರ ಮಾಹಿತಿಯೊಂದಿಗೆ ಸೈನ್ಯ ಮತ್ತು ಪೊಲೀಸ್ ತಂಡವು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸೈದ್ಪೋರಾ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರ ಒಳನುಸುಳುವಿಕೆಯನ್ನು ವಿಫಲಗೊಳಿಸಿದೆ. ಕಾರ್ಯಾಚರಣೆಯಲ್ಲಿ ಒಬ್ಬ ನುಸುಳುಕೋರನನ್ನು ಹತ್ಯೆಗೈಯಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.