ಪುತ್ತೂರು, ಫೆ. 23: ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ನವ ವಿವಾಹಿತನೊಬ್ಬ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತರನ್ನು ನರಿಮೊಗರು ಗ್ರಾಮದ ಧರ್ಮನಗರದ ನಿವಾಸಿ ಸುರೇಶ್ (30) ಎಂದು ಗುರುತಿಸಲಾಗಿದೆ. ಮೃತ ಸುರೇಶ್ 2 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಸುರೇಶ್ ಅವರು ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಹತ್ತೀರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎನ್ನಲಾಗಿದೆ.