ಪಡುಬಿದ್ರಿ, ಫೆ 24 : ಪತಿಯ ಮಾನಸಿಕ ಹಾಗೂ ದೈಹಿಕ ಹಿಂಸೆಯ ಕಾರಣದಿಂದ ಮನನೊಂದು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಮಮತಾ (42) ಎಂದು ಗುರುತಿಸಲಾಗಿದೆ.
ಮಮತಾ ತನ್ನ ತಾಯಿ, ಅಣ್ಣ ಹಾಗೂ ಅಕ್ಕ ಭಾರತಿಗೂ ಗಂಡನ ಮನೆಯಲ್ಲಿ ತಾನು ಅನುಭವಿಸುತ್ತಿದ್ದ ಹಿಂಸೆಯ ಬಗ್ಗೆ ದೂರವಾಣಿ ಮೂಲಕ ತಿಳಿಸುತ್ತಿದ್ದಳು ಎನ್ನಲಾಗಿದೆ. ಚಿತ್ರಹಿಂಸೆಯಿಂದಲೇ ತನ್ನ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ವಿರುದ್ಧ ಕ್ರಮ ಜರಗಿಸುವಂತೆ ಮಮತಾ ಅವರ ಅಣ್ಣ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಪಡುಬಿದ್ರಿ ಪೊಲೀಸರು ಸಂಶಯಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ