ಮಂಗಳೂರು, ಫೆ. 25 : ನಗರದ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರು ಫೆ. 24, ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ನಿರ್ಗಮನ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು ನೂತನ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಕುಲದೀಪ್ ಕುಮಾರ್ ಜೈನ್, ಭ್ರಷ್ಟಾಚಾರ ಸಹಿಸುವುದಿಲ್ಲ. ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು. ಎಲ್ಲಾ ರೀತಿಯ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ