ವಲ್ಸಾದ್, ಫೆ. 28 : ಗುಜರಾತ್‌ನ ವಲ್ಸಾದ್ ಜಿಲ್ಲೆಯ ಫಾರ್ಮಾ ಕಂಪೆನಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ವಲ್ಸಾದ್ ಜಿಲ್ಲೆಯ ಸರಿಗಾಮ್ ಜಿಐಡಿಸಿ ರಾಸಾಯನಿಕ ವಲಯದಲ್ಲಿರುವ ವ್ಯಾನ್ ಪೆಟ್ರೋಕೆಮ್ ಫಾರ್ಮಾ ಕಂಪನಿಯಲ್ಲಿ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಸ್ಪೋಟದ ತೀವ್ರತೆಗೆ ಕಟ್ಟಡದ ಒಂದು ಭಾಗ ಕುಸಿದಿದೆ. ಸ್ಪೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ವಲ್ಸಾಡ್ ಎಸ್ಪಿ ವಿಜಯ್ ಸಿಂಗ್ ಗುರ್ಜರ್ ತಿಳಿಸಿದ್ದಾರೆ.