ಮಂಗಳೂರು, ಮಾ. 10: ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತೊಕ್ಕೊಟ್ಟು ಕಾಪಿಕಾಡಲ್ಲಿ ಗುರುವಾರ ನಡೆದಿದೆ.
ಮೃತರನ್ನು ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್ ಗುತ್ತಿಗೆದಾರ ಜನಾರ್ದನ ಆಚಾರಿ (78) ಎಂದು ಗುರುತಿಸಲಾಗಿದೆ.
ಜನಾರ್ದನ ಅವರು ಗುರುವಾರ ಬೆಳಗ್ಗೆ ಮನೆಯಿಂದ ಹೊರಟವರು ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.