ಹಾಪುರ್, ಮಾ. 12 : ಪೊಲೀಸ್ ಪೇದೆಯೊಬ್ಬರು ತಮ್ಮ ಸೇವಾ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಕಾನ್ಸ್ಟೇಬಲ್ ಅಂಕಿತ್ ಕುಮಾರ್(25) ಆತ್ಮಹತ್ಯೆಗೆ ಶರಣಾದವರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಹಾಪುರ್ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ವರ್ಮಾ ತಿಳಿಸಿದ್ದಾರೆ.