ಮೂಡುಬಿದಿರೆ, ಮಾ. 14 : ಪುರಸಭೆ ವ್ಯಾಪ್ತಿಯ ಜ್ಯೋತಿನಗರ ನಿವಾಸಿ, ಪಿಯುಸಿ ವಿದ್ಯಾರ್ಥಿನಿ ಶಂಕಿತ ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾರೆ.
ಮೃತ ವಿದ್ಯಾರ್ಥಿನಿ ಯನ್ನು ಆಳ್ವಾಸ್ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ,ಜ್ಯೋತಿನಗರದ ಮಯ್ಯದ್ದಿ -ರಮ್ಲಾತ್ ದಂಪತಿಯ ದ್ವಿತೀಯ ಪುತ್ರಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ.
ಮಿಸ್ರಿಯಾ ಅವರು ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದೆ ಎನ್ನಲಾಗಿದೆ, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ.