ಉಡುಪಿ, ಮಾ. 15: ಗುಜರಿ ಅಂಗಡಿಯ ವಸ್ತುಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಉಡುಪಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ.
ಉಡುಪಿಯ ಕಿನ್ನಿ ಮುಲ್ಕಿಯ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯಲ್ಲಿ ಇರಿಸಿದ್ದ ಪ್ಲಾಸ್ಟಿಕ್ ಮತ್ತು ಇನ್ನಿತರ ಗುಜರಿ ವಸ್ತುಗಳಿಗೆ ಬೆಂಕಿ ತಗುಲಿದ್ದು, ತಡರಾತ್ರಿ ಅಗ್ನಿಶಾಮದಳ ಸಿಬ್ಬಂದಿಗಳು ಹರಸಾಹಸಟ್ಟು ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.