ಉತ್ತರಪ್ರದೇಶ, ಮಾ. 16 : ನಕಲಿ ವೈದ್ಯನೊಬ್ಬ ಎರಡೂವರೆ ವರ್ಷದ ಮಗುವಿಗೆ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಮಗು ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ತಿಲಕ್ ಸಿಂಗ್ ಎಂಬ ನಕಲಿ ವೈದ್ಯ ಮಗುವಿಗೆ ಸರ್ಜರಿ ನಡೆಸಿದ ಬಳಿಕ ಭಾರೀ ಪ್ರಮಾಣದಲ್ಲಿ ರಕ್ತ ಹರಿದು ಹೋದ ಪರಿಣಾಮ ಮಗು ಸಾವನ್ನಪ್ಪಿದೆ. ಈ ಘಟನೆಗೆ ಸಂಬಂಧಿಸಿದಂತೆ ನಕಲಿ ವೈದ್ಯನ ವಿರುದ್ಧ ಪೋಲಿಸರು ಎಫ್ ಐಆರ್ ದಾಖಲಿಸಿದ್ದಾರೆ.
ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಉಮೇಶ್ ಚಂದ್ರ ತ್ರಿಪಾಠಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.