ಶಿರ್ವ, ಮಾ. 18 : ಹೊನ್ನಾವರದಲ್ಲಿ ಕಾರು ಹಾಗೂ ಕಂಟೈನರ್ ನಡುವೆ ಅಪಘಾತ ಸಂಭವಿಸಿ ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹಾಯಕ ರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಮೃತರನ್ನು ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್ (40) ಗುರುತಿಸಲಾಗಿದೆ.
ಅನಂತೇಶ ರಾವ್ ಅವರು ಉಡುಪಿಯಿಂದ ಸೋದೆ ಮೂಲ ಮಠಕ್ಕೆ ತೆರಳುತ್ತಿದ್ದ ವೇಳೆ ಅವರ ಕಾರು ಹೊನ್ನಾವರದ ಬಳಿ ಕಂಟೈನರ್ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.