ಮಂಗಳೂರು ಮಾ.20 : ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾ. 13, ಸೋಮವಾರ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕವು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.
ಚಿತ್ರಾಪುರ ಮಠದ ಶ್ರೀ ವಿದ್ಯೆಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಕುಡುಪು ವೇIಮೂI ನರಸಿಂಹ ತಂತ್ರಿ, ಕೃಷ್ಣರಾಜ ತಂತ್ರಿ ಅವರ ಮುಂದಾಳತ್ವದಲ್ಲಿ ಪೂಜೆ, ಹೋಮಗಳು ಜರಗಿದವು. ಬೆಳಗ್ಗೆ 10.30ರ ವೃಷಭ ಲಗ್ನದಲ್ಲಿ ದೇವರಿಗೆ 1001 ಕಲಶಗಳ ಅಭಿಷೇಕ ನೆರವೇರಿತು. ಬಳಿಕ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾದರು. ಜೀರ್ಣೋದ್ದಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಮೊಗವೀರ ಸಮುದಾಯ, ಭಕ್ತ ವರ್ಗದವರು ಭಾಗಿಯಾದರು.