ಮಂಗಳೂರು, ಮಾ. 22 : ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿರುವ ಘಟನೆ ಮಾ. 21,ಮಂಗಳವಾರ ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದೆ.
ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಆಟೋ ಮತ್ತು ಕಾರೊಂದಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾಗಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿವೆ ಎನ್ನಲಾಗಿದೆ.