ಕುಂದಾಪುರ, ಮಾ 25 : ಟಿಪ್ಪರ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಕುಮಾರ್ ರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ,ಚಿಕಿತ್ಸೆ ಫಲಿಸದೆ ಕುಮಾರ್ ಸಾವನ್ನಪ್ಪಿದ್ದಾರೆ.
ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.