ಕಿನ್ನಿಗೋಳಿ, ಮಾ. 31: ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ನಡೆದಿದೆ.
ಮೃತ ಬಾಲಕನನ್ನು ಪಕ್ಷಿಕೆರೆ ಜುಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 ) ಎಂದು ಗುರುತಿಸಲಾಗಿದೆ.
ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿ ಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಹಿಲಾಲ್ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.