ಕಾರ್ಕಳ, ಏ. 01 : ಮುಂಡ್ಕೂರು ಗ್ರಾಮದ ನಿವಾಸಿ ರಮೇಶ್ ಸಪಳಿಗ (68) ವರ್ಷ ಎಂಬವರ ಮೃತದೇಹ ಮುಂಡ್ಕೂರು ಶಾಂಭವಿ ಹೊಳೆಯಲ್ಲಿ ಪತ್ತೆಯಾಗಿದೆ.
ವಿಪರೀತ ಮಧ್ಯಪಾನದ ಚಟ ಹೊಂದಿದ್ದ ರಮೇಶ್ ಸಪಳಿಗ ಮಾರ್ಚ್ 29 ರಂದು ರಾತ್ರಿ ಮಧ್ಯಪಾನ ಮಾಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿರಲಿಲ್ಲ.ಮಾ.31ರಂದು ಬೆಳಿಗ್ಗೆ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿ ಇರುವ ನಾಗಬನದ ಹತ್ತಿರದ ಶಾಂಭವಿ ನದಿಯಲ್ಲಿ ಮೃತದೇಹ ಸಿಕ್ಕಿದೆ.
ಮಧ್ಯಪಾನ ಮಾಡಿ ಬರುವಾಗ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ರಮೇಶ್ ಸಪಳಿಗ ಅವರ ಪುತ್ರ ಯೋಗಿಶ್ ಸಪಳಿಗ ನೀಡಿದ ದೂರಿನ ಪ್ರಕಾರ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.