ಮಂಗಳೂರು, ಏ 21 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಜೆ.ಆರ್.ಲೋಬೊ ಅವರು ಏ.21, ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಜೆ.ಆರ್.ಲೋಬೊ ಅವರು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಪಕ್ಷದ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ
ಮಂಗಳೂರು ನಗರದ ವಿವಿಧ ದೇವಾಲಯಗಳು, ಚರ್ಚ್ ಗಳು,ಮಸೀದಿಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಕುದ್ರೋಳಿ ದೇವಸ್ಥಾನದಿಂದ ಮಂಗಳೂರು ಮಹಾನಗರ ಪಾಲಿಕೆ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು.
ಈ ವೇಳೆ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಭಾಸ್ಕರ್ ಮೊಯ್ಲಿ,ಶಶಿಧರ್ ಹೆಗ್ಡೆ,ವಿಶ್ವಾಸ್ ದಾಸ್, ಅಬ್ದುಲ್ ಸಲಿಂ, ಪ್ರಕಾಶ್ ಸಾಲ್ಯಾನ್, ಪ್ರವೀಣ್ ಆಳ್ವ, ಕೇಶವ ಮರೋಳಿ ಮತ್ತಿತರರು ಉಪಸ್ಥಿತರಿದ್ದರು.
6 Comments
coffee shop
healing meditation
Obtaining secret information can give you an advantage in business over your competitors, and thanks to technological advancements, wiretapping is easier than ever these days.
Pingback: naza24
instrumental music
Pingback: design my own cornhole board