ಉಡುಪಿ, ಏ. 22:ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಏ. 20 ಗುರುವಾರ ಉಡುಪಿ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಿಂದ ಉಡುಪಿ ತಾಲ್ಲೂಕು ಕಚೇರಿಯವರೆಗೆ ಬೃಹತ್ ಪಾದಾಯಾತ್ರೆ ನಡೆಯಿತು. ಚೆಂಡೆ, ವಾದ್ಯ ಘೋಷಗಳ ನಡುವೆ ಕೇಸರಿ ಬಾವುಟ ಹಿಡಿದುಕೊಂಡ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಉಡುಪಿಯ ಪ್ರಮುಖ ರಸ್ತೆಗಳಲ್ಲಿ ಸಾಗಿ ಬಂದು ಯಶ್ ಪಾಲ್ ಸುವರ್ಣರಿಗೆ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ರಘುಪತಿ ಭಟ್, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಕುಂದಾಪುರ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ, ಸಚಿವರಾದ ಸುನಿಲ್ ಕುಮಾರ್, ಕಾಪು ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ, ಮಟ್ನಾರ್ ರತ್ನಾಕರ್ ಹೆಗ್ಡೆ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.