Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಕಾರ್ಯಾರಂಭ

    October 16, 2025

    ಪೇಸ್ ಶಿಕ್ಷಣ ಸಂಸ್ಥೆಗಳು 25ನೆ ವರ್ಷದ ಸಂಭ್ರಮದಲ್ಲಿ : ಡಿಸೆಂಬರ್ ವರೆಗೆ ‘ಪೇಸ್ ಸಿಲ್ವಿಯೋರಾ 2025’ ರ ವಿವಿಧ ಕಾರ್ಯಕ್ರಮಗಳು

    October 15, 2025

    ಸುಳ್ಯ : ಗುತ್ತಿಗಾರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಗುತ್ತಿಗಾರು ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ

    October 14, 2025

    Subscribe to Updates

    Get the latest creative news from FooBar about art, design and business.

    What's Hot

    ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಕಾರ್ಯಾರಂಭ

    October 16, 2025

    ಪೇಸ್ ಶಿಕ್ಷಣ ಸಂಸ್ಥೆಗಳು 25ನೆ ವರ್ಷದ ಸಂಭ್ರಮದಲ್ಲಿ : ಡಿಸೆಂಬರ್ ವರೆಗೆ ‘ಪೇಸ್ ಸಿಲ್ವಿಯೋರಾ 2025’ ರ ವಿವಿಧ ಕಾರ್ಯಕ್ರಮಗಳು

    October 15, 2025

    ಸುಳ್ಯ : ಗುತ್ತಿಗಾರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಗುತ್ತಿಗಾರು ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ

    October 14, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು: ನಗರ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ದಾಖಲೆಯ ಅನುದಾನ – ವೇದವ್ಯಾಸ್ ಕಾಮತ್
    Local News

    ಮಂಗಳೂರು: ನಗರ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ದಾಖಲೆಯ ಅನುದಾನ – ವೇದವ್ಯಾಸ್ ಕಾಮತ್

    adminBy adminApril 28, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಏ.28: ನಗರದ ಅಟಲ್ ಸೇವಾ ಕೇಂದ್ರದಲ್ಲಿ ಏ.24 ಸೋಮವಾರ ವೇದವ್ಯಾಸ ಕಾಮತ್ ಅವರು ತಮ್ಮ ಐದು ವರ್ಷಗಳ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿಯ ಕಾರ್ಯಗಳ “ಅಭಿವೃದ್ಧಿ ಪಥ” ಪುಸ್ತಕ ವನ್ನು ಬಿಡುಗಡೆಗೊಳಿಸಿ ನಂತರ ಮಾತನಾಡಿ, ಶಾಸಕನಾಗಿ ಕಳೆದ ಐದು ವರ್ಷಗಳ ಅವಧಿಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದೇನೆ. 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣಗೊಂಡಿದೆ ಎಂದರು.
    ಮುಂದಿನ ಅವಧಿಯಲ್ಲಿ ಈಗ ಪ್ರಗತಿಯಲ್ಲಿರುವ ಕಾಮಗಾರಿಗಳು ಸಂಪೂರ್ಣಗೊಳ್ಳಲಿದೆ. ಇನ್ನಷ್ಟು ಅಭಿವೃದ್ಧಿ ಯೋಜನೆಗಳು ಕಾರ್ಯಯೋಜನೆಗೊಂಡು 2025ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಹಾಲಿ ಶಾಸಕ ಹಾಗೂ ದಕ್ಷಿಣ ವಿಧಾನಸಭಾ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ.
    ಈ ಐದು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಜಲಸಿರಿ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, 792 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ನೀರಿನ ಪೈಪ್ ಗಳಲ್ಲಿ ಲೋಪ ಕಂಡು ಬಂದಲ್ಲಿ ಅದನ್ನು ತಕ್ಷಣ ಪರಿಹರಿಸಲು ಪಾಲಿಕೆಯಲ್ಲಿ ಕಂಪ್ಯೂಟರಿಕೃತ ವ್ಯವಸ್ಥೆಯ ಮೂಲಕ ಕ್ರಮ ಕೈಗೊಳ್ಳುವ ವಿಶೇಷ ವ್ಯವಸ್ಥೆ ಮಾಡಲಾಗುವುದು. 300 ಕೋಟಿ ಅನುದಾನದಲ್ಲಿ ಒಳಚರಂಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

    250 ಆಕ್ಸಿಜನ್ ಬೆಡ್, 50 ಕೋಟಿ ವೆಚ್ಚದಲ್ಲಿ ಸರ್ಜಿಕಲ್ ಬ್ಲಾಕ್, ಆಕ್ಸಿಜನ್ ಪ್ಲಾಂಟ್, 30 ಕೋಟಿ ರೂ ವೆಚ್ಚದಲ್ಲಿ ಲೇಡಿಗೋಶನ್ ಆಸ್ಪತ್ರೆ ನವೀಕರಣ,ತಾಯಿ-ಮಗು ವಿಶೇಷ ಚಿಕಿತ್ಸಾ ಕ್ರಮದ ಅಭಿವೃದ್ಧಿ, ನಾಲ್ಕು ನಮ್ಮ ಕ್ಲಿನಿಕ್ ಕೂಡ ವ್ಯವಸ್ಥೆಗೊಳಿಸಲಾಗಿದೆ.
    ಕ್ರೀಡಾಳುಗಳಿಗೆ ಮಂಗಳಾ ಕ್ರೀಡಾಂಗಣದಲ್ಲಿ ಅತ್ಯುನ್ನತ ಮೂಲಭೂತ ಸೌಕರ್ಯ ಮತ್ತು ಉನ್ನತೀಕರಣ, ಬಂದರು ಮತ್ತು ಮೀನುಗಾರಿಕಾ ಅಭಿವೃದ್ಧಿಗಾಗಿ 65 ಕೋಟಿ ರೂ ವೆಚ್ಚದಲ್ಲಿ ಬೆಂಗ್ರೆಯಲ್ಲಿ ಜೆಟ್ಟಿ ನಿರ್ಮಾಣ ನಡೆಯಲಿದ್ದು, ಅನೇಕ ಅಭಿವೃದ್ಧಿ ಕಾಮಗಾರಿ ನಡೆಯಲಿದೆ.

    ಪ್ರವಾಸೋದ್ಯಮ ಬೆಳವಣಿಗಾಗಿ ನೇತ್ರಾವತಿ ನದಿ ತೀರದಿಂದ ಸುಲ್ತಾನ್ ಭತ್ತೇರಿ ತನಕ ರಿವರ್ ಫಂಟ್ ಯೋಜನೆ ಕೂಡ ಜಾರಿಗೆ ಬರಲಿದೆ.ತುಳುನಾಡಿನ ಸಂಸ್ಕೃತಿ, ಆಚಾರಗಳನ್ನು ಮುಂದಿನ ತಲೆಮಾರಿಗೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ಹುಲಿವೇಷದೊಂದಿಗೆ ಕುಣಿತ, ಪ್ರವಾಸೋದ್ಯಮ ಬೆಳವಣಿಗೆ ಬೀದಿಆಹಾರ ಉತ್ಸವ ಕೂಡ ಮಾಡಿದ್ದು ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

    ಸುದ್ದಿಗೋಷ್ಟಿಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಚುನಾವಣಾ ಉಸ್ತುವಾರಿ ಸುಪ್ರಸಾದ್ ಶೆಟ್ಟಿ, ಮಂಡಲ ಬಿಜೆಪಿ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ,ಪ್ರಮುಖರಾದ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಾಜಿ ಮೇಯರ್ ಗಳಾದ ದಿವಾಕರ್ ಪಾಂಡೇಶ್ವರ, ಪ್ರೇಮಾನಂದ ಶೆಟ್ಟಿ,  ರೂಪಾ ಡಿ ಬಂಗೇರ, ಸುರೇಂದ್ರ ಜೆ ಮೊದಲಾದವರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News October 16, 2025

    ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಕಾರ್ಯಾರಂಭ

    Local News October 15, 2025

    ಪೇಸ್ ಶಿಕ್ಷಣ ಸಂಸ್ಥೆಗಳು 25ನೆ ವರ್ಷದ ಸಂಭ್ರಮದಲ್ಲಿ : ಡಿಸೆಂಬರ್ ವರೆಗೆ ‘ಪೇಸ್ ಸಿಲ್ವಿಯೋರಾ 2025’ ರ ವಿವಿಧ ಕಾರ್ಯಕ್ರಮಗಳು

    Local News October 14, 2025

    ಸುಳ್ಯ : ಗುತ್ತಿಗಾರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಗುತ್ತಿಗಾರು ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ

    Local News October 13, 2025

    ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 72 ನೇ ಅವತರಣೋತ್ಸವ ಅಮೃತೋತ್ಸವ 2025

    Local News October 12, 2025

    ಉಳ್ಳಾಲ : ಗುಜರಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ

    Local News October 11, 2025

    ಅ.27-ನ.2: ಚೀಫ್ ಮಿನಿಸ್ಟರ್ ಮಂಗಳೂರು ಇಂಡಿಯಾ ಇಂಟರ್ ನ್ಯಾಶನಲ್ ಚಾಲೆಂಜ್ ಬ್ಯಾಡ್ಮಿಂಟನ್ ಟೂರ್ನಿ

    Comments are closed.

    Demo
    Don't Miss
    Local News October 16, 2025

    ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಕಾರ್ಯಾರಂಭ

    ದೇರಳಕಟ್ಟೆ, ಅ. 16 :: ಸ್ಥಳೀಯರ ಹಾಗೂ ಉದ್ಯೋಗಿಗಳ ಅನುಕೂಲಕ್ಕಾಗಿ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಅನ್ನು…

    ಪೇಸ್ ಶಿಕ್ಷಣ ಸಂಸ್ಥೆಗಳು 25ನೆ ವರ್ಷದ ಸಂಭ್ರಮದಲ್ಲಿ : ಡಿಸೆಂಬರ್ ವರೆಗೆ ‘ಪೇಸ್ ಸಿಲ್ವಿಯೋರಾ 2025’ ರ ವಿವಿಧ ಕಾರ್ಯಕ್ರಮಗಳು

    October 15, 2025

    ಸುಳ್ಯ : ಗುತ್ತಿಗಾರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಗುತ್ತಿಗಾರು ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ

    October 14, 2025

    ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 72 ನೇ ಅವತರಣೋತ್ಸವ ಅಮೃತೋತ್ಸವ 2025

    October 13, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.