ಮಂಗಳೂರು, ಏ. 28 : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೊದಲ ದಿನದಿಂದಲೇ ಮಹಿಳೆಯರಿಗೆ ಸರಕಾರಿ ಬಸ್ಸಲ್ಲಿ ಉಚಿತ ಪ್ರಯಾಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಘೋಷಣೆ ಘೋಷಿಸಿದ್ದಾರೆ. ಇದು ಕಾಂಗ್ರೆಸ್ನ ಐದನೇ ಗ್ಯಾರಂಟಿಯಾಗಿದೆ.
ಮಂಗಳೂರು ನಗರದ ಹೊರವಲಯದ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಚುನಾವಣ ಪ್ರಚಾರದ ಬಹಿರಂಗ ಸಭೆಯಲ್ಲಿ ಮಾತನಾಡಿರುವ ರಾಹುಲ್ ಗಾಂಧಿ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಕಾಂಗ್ರೆಸ್ ನೀಡಿದ 4 ಭರವಸೆ ಮತ್ತು ರಾಜ್ಯದ ಸರಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಭರವಸೆಯನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು.
ಬಿಜೆಪಿ ಸರಕಾರ 40 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರದ ಮೂಲಕ ಈ ರಾಜ್ಯದ ಮಹಿಳೆಯರ ಹಣವನ್ನು ಕಸಿದುಕೊಂಡಿದೆ. ಆ ಹಣವನ್ನು ಈ ರಾಜ್ಯದ ಮಹಿಳೆಯರಿಗೆ ನಾವು ಮರಳಿಸಲಿದ್ದೇವೆ ಎಂದ ರಾಹುಲ್ ಗಾಂಧಿ, ಅದೇ ಹಣದಲ್ಲಿ ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸುತ್ತೇವೆ ಎಂದು ಭರವಸೆ ನೀಡಿದರು.
ಮೊದಿ ಅವರೇ, ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಹೇಳಿದ್ದೀರಿ. ಈ ಸಂದರ್ಭದಲ್ಲಿ ನಿಮಗೆ ಒಂದು ಸವಾಲು ಹಾಕುತ್ತಿದ್ದೇನೆ. ನಮ್ಮ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು, ನಾವು ನಮ್ಮ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ನಾವು ಈ ಯೋಜನೆಗಳನ್ನು ಜಾರಿ ಮಾಡಿದ ನಂತರ ನೀವು ದೇಶದಲ್ಲಿ ಈ ಯೋಜನೆಗಳನ್ನು ಜಾರಿ ಮಾಡಲು ಸಿದ್ಧರಿದ್ದೀರಾ? ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡಿದರು.
ಕೆಲವು ವರ್ಷಗಳಿಂದ ಇಲ್ಲಿ ಬಿಜೆಪಿ ಸರ್ಕಾರ ಇದೆ, ಬಿಜೆಪಿಯವರು ಭ್ರಷ್ಟಾಚಾರ ಹಣದಿಂದ ಶಾಸಕರನ್ನ ಖರೀದಿಸಿದ್ದರು. ತಮ್ಮ ಸರ್ಕಾರವನ್ನ ತಮ್ಮಿಂದ ಕಳವು ಮಾಡಿದ್ದರು, ಕಳ್ಳತನ ಇವರಿಗೆ ಅಭ್ಯಾಸ ಆಗಿ ಹೋಗಿದೆ. ಪೆಟ್ರೋಲ್ ಬೆಲೆ ಏರಿಕೆಯಾಗಿದೆ ಆಗಿದೆ. ಅಡಿಗೆ ಅನಿಲ 400 ರಿಂದ 1100 ರೂ. ಆಗಿದೆ. ನೋಟ್ ಬ್ಯಾನ್ ಬಡವರ ಹಣವನ್ನು ಕಡಿದು ಕೊಂಡಿದೆ. ಯುವಕರಿಗೆ ಉದ್ಯೋಗ ಸಿಗ್ತಾ ಇಲ್ಲ, ಬಿಜೆಪಿ ಸರ್ಕಾರ ಉದ್ಯೋಗ ಕಲ್ಪಿಸಲ್ಲ. 40 ಕೋಟಿ ಜನ ಮತ್ತೆ ಬಡತನ ರೇಖೆಯ ಕೆಳಗೆ ಹೋಗಿದ್ದಾರೆ. 90 ಲಕ್ಷ ಸಣ್ಣ ಮತ್ತು ಮಾಧ್ಯಮ ಕೈಗಾರಿಕೆ ಮುಚ್ಚಿ ಹೋಗಿದೆ.
ಬಿಜೆಪಿಯ ವಿಕಾಸ ಮಂತ್ರ ಯಾವುದೆಂದ್ರೆ ಭ್ರಷ್ಟಾಚಾರ 40%, ನಿರುದ್ಯೋಗ ಮತ್ತು ಬೆಲೆ ಏರಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.