ಬಂಟ್ವಾಳ, ಮೇ. 07 ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಪರವಾಗಿ ಶನಿವಾರ ಸಂಜೆ ಬಿ.ಸಿ.ರೋಡಿನಲ್ಲಿ ರೋಡ್ ಶೋ ನಡೆಯಿತು.
ಬಸ್ ತಂಗುದಾಣದ ಮುಂಭಾಗ ರಾ.ಹೆ.ಯ ಮಧ್ಯದಲ್ಲೇ ತೆರೆದ ವಾಹನದಿಂದಲೇ ಯೋಗಿ ಅದಿತ್ಯನಾಥ್ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತಾಡಿ ಕರ್ನಾಟಕ ರಾಜ್ಯವು ಉತ್ತರ ಪ್ರದೇಶದ ಮಾದರಿಯಲ್ಲೇ ಮುನ್ನಡೆಯಲು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕು ,ಬಂಟ್ವಾಳದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರನ್ನು ಮತ್ತೊಮ್ಮೆ ಭರ್ಜರಿ ಬಹುಮತದಿಂದ ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ರಾಷ್ಟ್ರವಿರೋಧಿ ಹಾಗೂ ನಕಾರತ್ಮಕ ವಿಷಯಗಳ ಮೂಲಕ ಚುನಾವಣೆ ಎದುರಿಸುತ್ತಿದೆ. ಭಾರತ ಪ್ರಧಾನಿ ನರೇಂದ್ರ ಮೋದಿಯುವರ ನೇತೃತ್ವದಲ್ಲಿಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು,ಅಭಿವೃದ್ಧಿ ಮತ್ತು ರಾಷ್ಟ್ರವಾದ ಗೆಲ್ಲಲು ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಸಿ.ಎಂ.ಯೋಗಿಯವರೊಂದಿಗೆ ತೆರದ ವಾಹನದಲ್ಲಿ ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿ,ಬಿಜೆಪಿ ರಾಜ್ಯಾಧ್ಯಕ್ಷ ,ಸಂಸದ ನಳಿನ್ ಕುಮಾರ್ ,ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಜೊತೆಗಿದ್ದರು.