ಉಡುಪಿ, ಮೇ 09 : ಸ್ಕೂಟರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಂಬಾಗಿಲಿನಿಂದ ಕಲ್ಸಂಕಕ್ಕೆ ಹೋಗುವ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಪುತ್ತೂರು ಗ್ರಾಮದ ಹನುಮಂತನಗರದ ನಿವಾಸಿ ರವಿಚಂದ್ರ ದೇವಾಡಿಗ (57) ಎಂದು ಗುರುತಿಸಲಾಗಿದೆ.
ಇವರು ಸ್ಕೂಟರ್ ಡಿವೈಡರ್ ಬಳಿ ತಿರುಗಿಸುತ್ತಿರುವಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಮಾರುತಿ ಆಲ್ಟೋ ಕಾರು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.