ಮಂಗಳೂರು, ಮೇ 10 :ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಉರ್ವದ ಗಾಂಧಿನಗರ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.
ಮಂಗಳೂರು:ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಮಂಗಳೂರಿನ ಸೈಂಟ್ ಆಗ್ನೇಸ್ ಹಿರಿಯ ಪ್ರಾಥಮಿಕ ಶಾಲೆ, ಬೆಂದೂರಿನಲ್ಲಿ ಇನಾಯತ್ ಅಲಿ ಮತ ಚಲಾಯಿಸಿದ್ದಾರೆ.
ಮಂಗಳೂರು :ಡಾ.ಭರತ್ ಶೆಟ್ಟಿ ವೈ ಅವರು ಕದ್ರಿ ಕೆಪಿಟಿ ಯ ಬೂತ್ ಸಂಖ್ಯೆ 132ರಲ್ಲಿ ಇಂದು ಬೆಳಗ್ಗೆ ಮತ ಚಲಾಯಿಸಲಿದ್ದಾರೆ.
ಮಂಗಳೂರು: ಉಳ್ಳಾಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಇವರು ಕುಂಪಲ ಮತಗಟ್ಟೆ ಸಂಖ್ಯೆ 127 ರಲ್ಲಿ ಪತ್ನಿ ಹಾಗೂ ಮಗಳ ಜತೆಗೆ ಬಂದು ಮತ ಚಲಾಯಿಸಿದ್ದಾರೆ.
ಮಂಗಳೂರು:ಉಳ್ಳಾಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಅವರ ಏಕೈಕ ಪುತ್ರಿ ಹವ್ವಾ ನಸೀಮ ತಮ್ಮ ಮೊದಲ ಹಕ್ಕನ್ನು ಜಾರದಗುಡ್ಡೆ ಶಾಲೆಯಲ್ಲಿ ತಂದೆ, ತಾಯಿಯ ಜೊತೆಗೆ ಮತ ಚಲಾಯಿಸಿದ್ದಾರೆ.
ಬಂಟ್ವಾಳ:ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ರಾಜೇಶ್ ನಾಯ್ಕ ತೆಂಕ ಎಡಪದವಿನ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಮತಗಟ್ಟೆ ಸಂಖ್ಯೆ 186ರಲ್ಲಿ ಮತ ಚಲಾಯಿಸಿದ್ದಾರೆ.
ಬಂಟ್ವಾಳ :ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಕುಟುಂಬ ಸಮೇತರಾಗಿ ಕಳ್ಳಿಗೆ ಗ್ರಾಮದ ತೊಡಂಬಿಲ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ.
ಮಂಗಳೂರು :ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೋ ನಗರದ ಬೆಂದೂರ್ನ ಸಂತ ಸಭೆಸ್ಬಿಯನ್ ಹಿ.ಪ್ರಾ.ಶಾಲೆಯಲ್ಲಿ ಮತ ಚಲಾಯಿಸಿದ್ದಾರೆ.
ರಾಜ್ಯಾದ್ಯಂತ ಇಂದು ಬೆಳ್ಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡು ಸಂಜೆ 6 ಗಂಟೆಯ ವರೆಗೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ.