ಬೆಂಗಳೂರು, ಮೇ. 13: ವಿಧಾನಸಭಾ ಚುನಾವಣೆ ಹೋರಾಟದಲ್ಲಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಜಯ ಗಳಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ.
ಬಿಜೆಪಿ ಆಡಳಿತ ವಿರೋಧಿ ಅಲೆಗೆ ಕೊಚ್ಚಿ ಹೋಗಿ ಹೀನಾಯ ಸೋಲು ಕಂಡಿದ್ದು, ಕೇವಲ 66 ಕ್ಷೇತ್ರಗಳಲ್ಲಷ್ಟೇ ಗೆಲ್ಲಲು ಶಕ್ತವಾಗಿದೆ. ಜೆಡಿಎಸ್ ಪಕ್ಷ ಕೇವಲ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಈ ಫಲಿತಾಂಶದಿಂದ ಬಿಜೆಪಿ-ಜೆಡಿಎಸ್ ಲೆಕ್ಕಾಚಾರಗಳು ತಲೆಕೆಳಗಾಗಿವೆ.
ಈ ಚುನಾವಣೆಯಲ್ಲಿ ರಾಜ್ಯದ ಮತದಾರರು ಸ್ಥಿರ ಸರಕಾರ ಬೇಕೆಂಬ ಉದ್ದೇಶದೊಂದಿಗೆ ಒಂದೇ ಪಕ್ಷದ ಆಡಳಿತಕ್ಕೆ ಬಹುಮತದ ತೀರ್ಪು ನೀಡುವ ಮೂಲಕ ರಾಜಕೀಯ ಪ್ರಜ್ಞೆ ಮೆರೆದಿದ್ದಾರೆ.