ಉಡುಪಿ,ಮೇ.24: ಮಗಳ ಮದುವೆ ಕಾರ್ಯಕ್ಕೆಂದು ಮುಂಬೈಯಿಂದ ಬಂದು ಹೊಟೇಲಿನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮೇ 21ರಂದು ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ.
ಮೇ22ಕ್ಕೆ ಇವರ 2ನೇ ಮಗಳಿಗೆ ಉಡುಪಿ ಶ್ಯಾಮಿಲಿ ಸಭಾಭವನದಲ್ಲಿ ಮದುವೆ ನಿಶ್ಚಯವಾಗಿದ್ದು, ಈ ಸಂದರ್ಭದಲ್ಲಿ ಮೇ19ರಂದು ಇಡೀ ಕುಟುಂಬ ಸಮೇತರಾಗಿ ಬಂದು ಉಡುಪಿಯ ಹೊಟೇಲೊಂದರಲ್ಲಿ ತಂಗಿದ್ದರು, ಹೊಟೇಲ್ ರೂಮ್ ಒಳಗಡೆ ನಡೆಯುವಾಗ ಕಾಲು ಜಾರಿ ಬಿದ್ದು ತಲೆಗೆ ತೀವ್ರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.