ಮಂಗಳೂರು, ಮೇ. 25 : ಸರಕಾರದ ನಿಯಮದಂತೆ ಕರಾವಳಿಯಲ್ಲಿ ಜೂ. 1ರಿಂದ ಜು. 31ರ ವರೆಗೆ ಎರಡು ತಿಂಗಳು ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.
ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.
ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧವಾಗಿರುವುದು ಹಾಗೂ ಮೀನು ಸಂತಾನೋತ್ಪತ್ತಿ ಮಾಡುವ ಹಿನ್ನೆಲೆ ಮೀನುಗಾರಿಕೆ ನಿಷೇಧಿಸಲಾಗಿದೆ.