ಮೈಸೂರು, ಮೇ. 26 : ಜಿ.ಎಚ್.ನಾಯಕ ಎಂದು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ವಿಮರ್ಶಕರಾದ ಗೋವಿಂದರಾಯ ಹಮ್ಮಣ್ಣ ನಾಯಕ(88) ಅವರು ಶುಕ್ರವಾರ ನಿಧನ ಹೊಂದಿದ್ದಾರೆ.
ಜಿ.ಎಚ್.ನಾಯಕ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಮುಂದೆ ಪ್ರಾಧ್ಯಾಪಕರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.
ಎಚ್.ನಾಯಕ ಅವರು ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದರು. ಅವರು ಪತ್ನಿ ಮೀರಾ, ಪುತ್ರಿ ಕೀರ್ತಿ ಹಾಗೂ ಮೊಮ್ಮಗಳನ್ನು ಅಗಲಿದ್ದಾರೆ.