ಪುತ್ತೂರು, ಜೂ. 05 : ಮರದ ದಿಮ್ಮಿಯನ್ನುವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಪುತ್ತೂರಿನ ಸುಳ್ಯಪದವು ಎಂಬಲ್ಲಿ ಜೂ.5, ಸೋಮವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ.
ಗೋಪಾಲಕೃಷ್ಣ ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದು, ಟಿಪ್ಪರ್ನ ಹಿಂದಿನ ಬಾಗಿಲನ್ನು ಸರಿಪಡಿಸುವ ವೇಳೆ ಮರದ ದಿಮ್ಮಿ ಮೈಮೇಲೆ ಬಿದ್ದಿದೆ. ಈ ಪರಿಣಾಮ ಗಂಭೀರ ಗಾಯಗೊಂಡಿದ್ದ ಗೋಪಾಲಕೃಷ್ಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ತಾಯಿ, ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.