ಪುತ್ತೂರು, ಜು. 06: ಕಾರು ಅಪಘಾತ ಸಂಭವಿಸಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಗುರುವಾರ ನಡೆದಿದೆ.
ಮೃತರನ್ನು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಬಿಬಿಎಂ ವಿದ್ಯಾರ್ಥಿನಿ, ಪುತ್ತೂರು ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಅವರ ಪುತ್ರಿ ಖತೀಜತ್ ಹನಾ (19) ಎಂದು ಗುರಿತಿಸಲಾಗಿದೆ.
ಖತೀಜತ್ ಹನಾ ಇವರು ಪುತ್ತೂರಿನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಹೋಗುತ್ತಿದ್ದ ವೇಳೆ ರಾಮಲ್ ಕಟ್ಟೆ ತಲುಪಿದಾಗ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ಪಲ್ಟಿಯಾಗಿದೆ ಈ ವೇಳೆ ಗಂಭೀರ ಗಾಯಗೊಂಡ ಖತೀಜತ್ ಹನಾ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತದರೂ ಅದಾಗಲೇ ಆಕೆ ಮೃತಪಟ್ಟಿದ್ದಾರೆ ಎನ್ನಲಾಗಿದೆ .ಇವರ ಜೊತೆಗಿದ್ದ ಈಕೆಯ ತಾಯಿ ಮತ್ತು ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಬಂಟ್ವಾಳ ಸಂಚಾರ ಠಾಣಾಧಿಕಾರಿ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿದ್ದಾರೆ.