ಕಾರ್ಕಳ, ಜು. ೦7: ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ಮಣ್ ಪೇಟೆಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ.
ಪ್ರವೀಣ್ ಆಚಾರ್ಯ ಅವರು ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆ ಪಕ್ಕದಲ್ಲಿದ್ದ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು,ಮರದಡಿಯಲ್ಲಿ ಸಿಲುಕಿಕೊಂಡಿದ್ದ ಅವರನ್ನುತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.