ಮಂಗಳೂರು ಜು. 08 : ಚಿಕ್ಕಬಳ್ಳಾಪುರದ ಉಪವಿಭಾಗಾಧಿಕಾರಿಯಾಗಿದ್ದ ಡಾ.ಜಿ.ಸಂತೋಷ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ದಂಡಾಧಿಕಾರಿ ಹುದ್ದೆಗೆ ನಿಯುಕ್ತಿಗೊಳಿಸಿ ಸರಕಾರ ಶುಕ್ರವಾರ ಆದೇಶ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದ ಎಚ್.ಕೃಷ್ಣಮೂರ್ತಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಹುದ್ದೆ ಖಾಲಿಯಾಗಿತ್ತು. ಹೀಗಾಗಿ ಡಾ. ಸಂತೋಷ ಕುಮಾರ್ ಅವರನ್ನು ಖಾಲಿ ಇದ್ದ ಹುದ್ದೆಗೆ ನೇಮಕ ಮಾಡಲಾಗಿದೆ.