ನವದೆಹಲಿ,ಜು. 11: ದೆಹಲಿ – ಮೀರತ್ ಎಕ್ಸ್‌ಪ್ರೆಸ್ ವೇಯಲ್ಲಿ ಶಾಲಾ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟಿರುವ ಘಟನೆ ಗಾಜಿಯಾಬಾದ್ ನಲ್ಲಿ ಮಂಗಳವಾರ ನಡೆದಿದೆ.
ಈ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಸದಸ್ಯರು ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ನಲ್ಲಿ ಯಾವುದೇ ವಿದ್ಯಾರ್ಥಿಗಳು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.