ಬಂಟ್ವಾಳ, ಜು. 22: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮಹಡಿ ಮೇಲೆ ಬಿದ್ದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಲಾರಿಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ.
ಬಾಂಬಿಲ ಆಶ್ಬಕ್ ಎಂಬವರ ಮನೆಯ ಮಹಡಿಗೆ ಲಾರಿ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ.ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಮಧ್ಯ ರಾತ್ರಿ ಬಾಂಬಿಲ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಬಿದ್ದಿದೆ ಎನ್ನಲಾಗಿದೆ.