ಕಾರ್ಕಳ, ಆ. 05 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಶುಕ್ರವಾರ ಸಂಭವಿಸಿದೆ.
ರೆನಾಲ್ಟ್ ಡಸ್ಟರ್ ಕಾರು ಶುಕ್ರವಾರ ಮುಂಜಾನೆ ಕಾಡುಹೊಳೆ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಯಾವುದೇ ಗಾಯಗಳಿಲ್ಲದೇ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.