ಮಂಗಳೂರು, ಆ,10: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ಆ.09, ಬುಧವಾರ ಸನ್ಮಾನಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನಗರದ ಭೋಜರಾವ್ ಲೈನ್ ನಲ್ಲಿರುವ ಅವರ ಸ್ವಗೃಹ ಕ್ಕೆ ತೆರಳಿ ಜಿಲ್ಲಾಡಳಿತ ಪರವಾಗಿ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿದ್ದರು.