ಬೆಳ್ತಂಗಡಿ, ಆ .14 : ಸ್ಕೂಟರೊಂದು ವಿದ್ಯುತ್ ಕಂಬವೊಂದಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ಸಮೀಪದ ವರಂಗದ ಮಾತಿಬೆಟ್ಟು ಎಂಬಲ್ಲಿ ಆ.13, ಆದಿತ್ಯವಾರ ನಡೆದಿದೆ.
ಮೃತರನ್ನು ಸೂರಿಮಣ್ಣು ನಿವಾಸಿ ಪ್ರಭಾಚಂದ್ರ ಆಚಾರ್ಯ ಎಂದು ಗುರುತಿಸಲಾಗಿದೆ.
ಪ್ರಭಾಚಂದ್ರ ಆಚಾರ್ಯ ಇವರು ಸ್ಕೂಟರಿನಲ್ಲಿ ಮುನಿಯಾಲು ಕಡೆಯಿಂದ ವರಂಗ ಕಡೆಗೆ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸ್ಕೂಟರ್ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಪ್ರಭಾಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.