ಐಜ್ವಾಲ್, ಆ 23 : ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿರುವ
ಘಟನೆ ಮಿಜೋರಾಂನಲ್ಲಿ ನಡೆದಿದೆ.
ಬುಧವಾರ ಐಜ್ವಾಲ್ ಸಮೀಪದ ಸಾಯಿರಾಂಗ್ನಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದಿದೆ. ಇದರ ಪರಿಣಾಮ 17 ಮಂದಿ ಸಾವನ್ನಪ್ಪಿ ಹಲವರು ಮಂದಿ ಗಾಯಗೊಂಡಿದ್ದಾರೆ.
ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ನೀಡುವುದಾಗಿ ಘೋಷಿಸಿದ್ದಾರೆ.