ಬೈಂದೂರು, ಆ. 28 : ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ನೀರು ಪಾಲಾದ ಘಟನೆ ರವಿವಾರ ಅಳ್ವೆಗದ್ದೆಯಲ್ಲಿ ನಡೆದಿದೆ.
ಮೃತರನ್ನು ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಬ್(22) ಹಾಗೂ ನಝಾನ್(24) ಎಂದು ಗುರುತಿಸಲಾಗಿದೆ.
ಕೆಲ ದಿನಗಳಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿರುವ ಇವರು ಭಾನುವಾರ ಕೈರಂಪಣಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿದ್ದರು. ಸಮುದ್ರ ಪ್ರಕ್ಷುಬ್ದ ಇರುವ ಕಾರಣ ಇಬ್ಬರು ಮೀನುಗಾರರು ಆಯತಪ್ಪಿ ಕಡಲ ಸಮುದ್ರ ಪಾಲಾಗಿದ್ದಾರೆ ಎನ್ನಲಾಗಿದೆ.