ಉಳ್ಳಾಲ, ಆ. 29: ಸ್ನೇಹಿತರ ಜತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದ ಯುವಕನೋರ್ವ ನೀರುಪಾಲಾಗಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ.
ಮೃತರನ್ನು ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ದಿ. ಸುಬ್ರಾಯ ಆಚಾರ್ಯ-ಉಮಾವತಿ ದಂಪತಿ ಪುತ್ರ ಹರಿಪ್ರಸಾದ್ ಆಚಾರ್ಯ(36) ಎಂದು ಗುರುತಿಸಲಾಗಿದೆ.
ತಲಪಾಡಿಯಲ್ಲಿರುವ ಖಾಸಗಿ ಜಾಗದಲ್ಲಿರುವ ಕೊಳಕ್ಕೆ ಸ್ನಾನಕ್ಕೆಂದು ಬಂದಿದ್ದ ನಾಲ್ವರ ಪೈಕಿ ಹರಿಪ್ರಸಾದ್ ನೀರಿನಡಿಯ ಕೆಸರಿನಲ್ಲಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.