ಜೋಹಾನ್ಸ್‌ಬರ್ಗ್ , ಸೆ. 3 : ಐದಂಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ ಕನಿಷ್ಠ 63 ಮಂದಿ ಮೃತಪಟ್ಟ ಘಟನೆ ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ಗುರುವಾರ ನಡೆದಿದೆ. ಸುಮಾರು 200 ಜನರು ಕಟ್ಟಡದಲ್ಲಿ ವಾಸವಿದ್ದರು ಎನ್ನಲಾಗಿದೆ.
ಮಧ್ಯ ಜೋಹಾನ್ಸ್‌ಬರ್ಗ್ ನ ಬಹುಮಹಡಿ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 63 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆಯೆಂದು ತುರ್ತು ನಿರ್ವಾಹಣಾ ಅಧಿಕಾರಿಗಳು ಹೇಳಿದ್ದಾರೆ.