ಉಡುಪಿ,ಸೆ.05: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಸಮೀಪದ ಶಾಂತಿನಗರದಲ್ಲಿ ನಡೆದಿದೆ.
ಮೃತರನ್ನು ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29 ಎಂದು ಗುರುತಿಸಲಾಗಿದೆ.
ವಿರಾಜ್ ಅವರು ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ. ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ. ಇಂದು ಮಂಗಳವಾರ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.