ಬೆಂಗಳೂರು, ಸೆ. 18 : ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ. ಮೃತರನ್ನು ಅಗಸ್ಟಿನ್, ದಾರಾರೆಡ್ಡಿ ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ.
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು,ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ವೇಗವಾಗಿ ಚಲಿಸುತ್ತಿದ್ದ ವೇಳೆ ಕಾರಿನ ಚಕ್ರ ಬ್ಲಾಸ್ಟ್ ಆದ ಪರಿಣಾಮ ಅಪಘಾತ ಸಂಭವಿಸಿ ಕಾರು ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.