ಕಾಸರಗೋಡು, ಸೆ .19 : ರಸ್ತೆಯ ಹೊಂಡದಲ್ಲಿ ಸಿಲುಕಿದ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಮೃತರನ್ನು ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್ ಮೈಕಲ್ ಶಾಲಾ ಸಮೀಪದ ಮಹೇಶ್ಚಂದ್ರ ಬಾಳಿಗಾ ರವರ ಪುತ್ರಿ ಶಿವಾನಿ ಬಾಳಿಗಾ (20) ಎಂದು ಗುರುತಿಸಲಾಗಿದೆ. ರವಿವಾರ ರಾತ್ರಿ ಕಾಸರಗೋಡು ಚಂದ್ರಗಿರಿ ರಸ್ತೆಯ ಪಿಲಿಕುಂಜೆ ಎಂಬಲ್ಲಿ ಅಪಘಾತ ನಡೆದಿತ್ತು.
ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಶಿವಾನಿ ಗಂಭೀರ ಗಾಯಾಗೊಂಡಿದ್ದು,ಅವರನ್ನು.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸಾವನ್ನಪ್ಪಿದ್ದಾರೆ. ಕಾಸರಗೋಡು ಪೊಲೀಸ್ ಸ್ಟೇಷನ್ನಿನಲ್ಲಿಪ್ರಕರಣ ದಾಖಲಾಗಿದೆ.