ಮಂಗಳೂರು, ಸೆ. 21 : ನಗರದ ಕೊಡಿಯಾಲ್ ಬೈಲ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನೂತನವಾಗಿ ನಿರ್ಮಿಸಲಾಗಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಿದರು.
ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಿದ್ದರು.ಈ ಸಂದರ್ಭದಲ್ಲಿ ಗಣ್ಯರು ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಕುದ್ಮಲ್ ರಂಗ ರಾವ್ ಅವರ ಭಾವಚಿತ್ರಕ್ಕೆ ಪುಪ್ಷಾರ್ಚನೆ ಮಾಡಿದರು.
ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿ.ಪಂ. ಸಿಇಒ ಡಾ. ಆನಂದ್, ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
2 Comments
Pingback: sleep jazz
Pingback: smooh jazz