ಉಳ್ಳಾಲ,ಸೆ. 25 : ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನಲ್ಲಿ ನಡೆದಿದೆ.
ಮೃತರನ್ನು ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಎಂದು ಗುರುತಿಸಲಾಗಿದೆ.
ಭಾನುವಾರ ತೊಕ್ಕೊಟ್ಟು ಪ್ಲೈಓವರ್ ಸಂಪರ್ಕಿಸುವ ಕೆರೆಬೈಲು ನಾಗನ ಕಟ್ಟೆ ಬಳಿ ಚಲಿಸುತ್ತಿದ್ದ ಸ್ಕೂಟರ್ ನಿಂದ ಸುಮಾ ಅವರು ಉರುಳಿ ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.